ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ…

171
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಎನ್‍ಕೌಂಟರ್ ಮುಂದುವರೆದಿದ್ದು, ಇಂದು ಬೆಳಿಗ್ಗೆ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಟುರ್ಕ್ ಎಂಬ ಪ್ರದೇಶದಲ್ಲಿ ಉಗ್ರರು ಇರುವ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ.