ಜಮ್ಮು ಕಾಶ್ಮೀರಾದ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ…

140
firstsuddi

ಜಮ್ಮು ಕಾಶ್ಮೀರ : ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸಿದ ಮೂವರು ಪಾಕಿಸ್ತಾನ ಮೂಲದ ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಗಡಿಯಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ವೇಳೆ ಜಮ್ಮು ಕಾಶ್ಮೀರಾದ ನೌಶೇರಾ ಸೆಕ್ಟರ್‍ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಗೆ ನುಸುಳಲು ಯತ್ನಿಸಿದ್ದ ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದು, ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.