ಜಮ್ಮು ಕಾಶ್ಮೀರಾ ಎನ್‍ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು…

175
firstsuddi

ಶ್ರೀನಗರ : ಗಡಿಯಲ್ಲಿ ಭಾರತೀಯ ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಚಕುರ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ತಿಳಿದ ಯೋಧರು ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.