ಜಮ್ಮು-ಕಾಶ್ಮೀರ : ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಉಗ್ರರು ಹತ್ಯೆ…

111
Firstsuddi

ಶ್ರೀನಗರ : ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇಂದು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ವಲಯ ಪೊಲೀಸರು ಹಾಗೂ ಸಿಆರ್ ಪಿಎಫ್ ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಶೋಪಿಯಾನ್ ಜಿಲ್ಲೆಯ ಮಣಿಹಾಲ್ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಮಯದಲ್ಲಿ, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಉಗ್ರರನ್ನು ಶರಣಾಗುವಂತೆ ಕೇಳಿದರು. ಆದರೆ ಉಗ್ರರು ಅದಕ್ಕೆ ಒಪ್ಪದೇ ಇದ್ದಾಗ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಶ್ರೀನಗರ ಸೇನಾ ವಕ್ತಾರ ತಿಳಿಸಿದ್ದಾರೆ.