ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಓರ್ವ ಉಗ್ರನನ್ನು ಭದ್ರತಾ ಸಿಬ್ಬಂಧಿ ಹೊಡೆದುರುಳಿಸಿದ್ದಾರೆ. ಗುಪ್ತಚರ ಇಲಾಖೆಯವರಿಂದ ಜಮ್ಮು ಕಾಶ್ಮೀರದ ಕುಲ್ಗಾಮ್ ಎಂಬ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಜಮ್ಮುವಿನ ರತ್ನಚುಕ್ ಸೇನಾ ಕ್ಯಾಂಪ್ ಬಳಿ ಇಬ್ಬರು ಶಂಕಿತ ಉಗ್ರರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ಬಂಧಿತ ಉಗ್ರರು ಸೇನಾ ಕ್ಯಾಂಪ್ನ ವಿಡೀಯೋ ಮಾಡಿ ಪಾಕಿಸ್ತಾನಕ್ಕೆ ಕಳುಹಿಸಿತ್ತದ್ದರು ಎಂದು ತಿಳಿದು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.