ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿ ಭಾರತೀಯ ಸೇನೆ…

238
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.