ಜಯಪ್ರಕಾಶ್ ಹೆಗಡೆ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶೀಲರಾಗುವ ಮೂಲಕ ಮತ್ತೊಮ್ಮೆ ಚಿಕ್ಕಮಗಳೂರು ಕಾಂಗ್ರೆಸ್ ನ ಭದ್ರಕೋಟೆ ಆಗಲಿದೆ: ಜೆ. ಕೆ.ಸೋಮಶೇಖರ್.

53
firstsuddi

ಚಿಕ್ಕಮಗಳೂರು:- ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶೀಲರಾಗುವ ಮೂಲಕ ಮತ್ತೊಮ್ಮೆ ಚಿಕ್ಕಮಗಳೂರು ಕಾಂಗ್ರೆಸ್ ನ ಭದ್ರಕೋಟೆ ಆಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಕೀಲ ಜೆ. ಕೆ.ಸೋಮಶೇಖರ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು 1967 ರಿಂದ ಚಿಕ್ಕಮಗಳೂರು ಸ್ವಾತಂತ್ರ ಲೋಕಸಭಾ ಕ್ಷೇತ್ರವಾಗಿ ನಡೆದ ಚುನಾವಣೆಗಳಲ್ಲಿ ಅತಿ ಹೆಚ್ಚು ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

1998ರಿಂದ ಬಿಜೆಪಿ ಈ ಕ್ಷೇತ್ರವನ್ನು ತನ್ನ ಮಡಲಿಗೆ ತೆಗೆದುಕೊಂಡಿದ್ದರು ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ,ಸೃಜನ ಪಕ್ಷಪಾತ, ಕೋಮುವಾದವನ್ನು ಕಂಡು ಬೇಸತ್ತ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‍ ಗೆಲ್ಲಿಸುವ ಮೂಲಕ ಜಿಲ್ಲೆಯಲ್ಲಿ ಬಿಜೆಪಿಯನ್ನು ಮನೆಗೆ ಕಳಿಸಿ ಪುನಹ ಕಾಂಗ್ರೆಸ್ ಭದ್ರಕೋಟೆ ಎಂದು ಸಾಬೀತುಪಡಿಸಿದ್ದಾರೆ.
ಇದೆ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಪುನಃ ಕಾಂಗ್ರೆಸ್‍ ತನ್ನ ಆಧಿಪತ್ಯವನ್ನು ಸ್ಥಾಪಿಸಲಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಮತದಾರ ಈ ಬಾರಿ ಬದಲಾವಣೆಯನ್ನು ಬಯಸಿದ್ದು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಸರ್ಕಾರ ಬಡವರ ಬದುಕಿನ ಬಗ್ಗೆ ಚಿಂತನೆ ಮಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕನ್ನು ಹಸನು ಗೊಳಿಸಿದ್ದು ರಾಜ್ಯದ ಪ್ರತಿಕುಟುಂಬ ಹೊಂದಿಲ್ಲ ಒಂದು ಯೋಜನೆಯಲ್ಲಿ ಲಾಭ ಪಡೆಯುತ್ತಿದ್ದು ಬದುಕು ದುಸ್ತರವಾಗಿರುವ ಈ ಕಾಲಘಟ್ಟದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ನೆರವಿಗೆ ಬಂದಿರುವುದನ್ನು ಮರೆಯದೆ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ಸನ್ನು ಗೆಲ್ಲಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕ್ಷೇತ್ರದ ಕಾಂಗ್ರೆಸ್‍ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಒಮ್ಮೆ ಎರಡು ವರ್ಷಗಳ ಕಾಲ ಸಂಸದರಾದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮೂಲಕ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುತ್ತಾರೆ. ಸಂಸದರಾದ ಸಂದರ್ಭದಲ್ಲಿ ರೈಲ್ವೇ, ರಸ್ತೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆತರಲು ಪ್ರಯತ್ನಿಸಿದ್ದು ಉತ್ತಮ, ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ಜಿಲ್ಲೆಯ ಪ್ರತಿಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಸರುವಾಸಿ ಆಗಿದ್ದಾರೆ.

ನಂತರ ಬಂದ ಸಂಸದರು ಯಾವುದೇ ಕೆಲಸವನ್ನು ಪೂರ್ಣಗೊಳಿಸದ್ದೇ ಹಾಗೆಯೇ ಉಳಿಸಿದ್ದು ಆ ಕೆಲಸ ಕಾರ್ಯಗಳನ್ನು ಪುನಃ ಜಯ ಪ್ರಕಾಶ್ ಹೆಗಡೆಗೆದ್ದು ಬಂದು ಪೂರ್ಣಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

*ಖಂಡನೀಯ*
ಚುನಾವಣಾ ಪ್ರಚಾರದ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂದು ಹೇಳಿರುವುದು ಖಂಡನೀಯ ಎರಡು ಬಾರಿ ಮುಖ್ಯಮಂತ್ರಿ ಆದಂತವರು, ರಾಜ್ಯದ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.