ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ತೆರಳಿದ ಮೋದಿ.

61
firstsuddi

ಜರ್ಮನಿ : ಜರ್ಮನಿಯಲ್ಲಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಗೆ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅವರು ಜಿ -7 ಶೃಂಗಸಭೆಯ ತಮ್ಮ ಭೇಟಿಯನ್ನು ಮುಕ್ತಾಯಗೊಳಿಸಿದರು. ಜಾಗತಿಕ ಸವಾಲುಗಳಿಗೆ ಸುಸ್ಥಿರ ಪರಿಹಾರಗಳ ಕುರಿತು ಎರಡು ದಿನಗಳ ಚರ್ಚೆಗಳನ್ನು ಮುಗಿಸಿದರು. ದೆಹಲಿಯನ್ನು ತಲುಪುವ ಮೊದಲು ಅಬುಧಾಬಿಗೆ ಪ್ರಯಾಣಿಸುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಪ್ರಧಾನಿಯವರು ಯುಎಇಯಲ್ಲಿ ಅಲ್ಲಿನ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಲಿದ್ದಾರೆ.