ಜವಾದ್ ಚಂಡಮಾರುತ : 12 ರೈಲುಗಳ ಸೇವೆ ರದ್ದು…

99
firstsuddi

ಬೆಂಗಳೂರು : ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಇಂದಿನಿಂದ ಶನಿವಾರದವರೆಗೆ 12 ರೈಲುಗಳ ಸೇವೆಗಳನ್ನು ರದ್ದುಪಡಿಸಲಾಗಿದೆ.

ಇಂದು ರೈಲು ಸಂಖ್ಯೆ 12509 ಬೆಂಗಳೂರು ಕಂಟೋನ್ಮೆಂಟ್ – ಗುವಾಹಟಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರದ್ದಾಗಿದೆ, ಡಿ.3ರಂದು(ನಾಳೆ), ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ ಪ್ರೆಸ್, ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್, ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಸೇವೆ ರದ್ದಾಗಿದೆ.

ಇನ್ನೂ ಡಿ.4ರಂದು ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.