ಜಾನಪದ ಕಲೆಗಳ ತರಬೇತಿ ಕಾರ್ಯಾಗಾರ: ಆಸಕ್ತ ಕಲಾವಿದರು ಡಿ.15ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಜಿ.ಬಿ.ಸುರೇಶ್ ಸೂಚನೆ…

63
firstsuddi

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ಅಜ್ಜಂಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.17ರಂದು ಜಾನಪದ ಕಲೆಗಳ ತರಬೇತಿ ಕಾರ್ಯಾಗಾರ ನಡೆಯಲಿದೆ.

ತರಬೇತುದಾರರಾಗಿ ಹಿರಿಯ ವೀರಗಾಸೆ ಕಲಾವಿದ ಡಾ.ಮಾಳೇನಹಳ್ಳಿ ಬಸಪ್ಪ, ರಂಗ ಸಂಘಟಕ ಎ.ಸಿ.ಚಂದ್ರಪ್ಪ, ಮುಗುಳಿ ಲಕ್ಷ್ಮೀದೇವಮ್ಮ ಭಾಗವಹಿಸಲಿದ್ದು, ತಹಶೀಲ್ದಾರ್ ಶಿವಶರಣಪ್ಪ, ಜಿ.ತಿಪ್ಪೇಶ್, ಮರುಳಸಿದ್ಧಪ್ಪ, ಜಯಣ್ಣಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಾಗಾರದಲ್ಲಿ ವೀರಗಾಸೆ, ಡೊಳ್ಳುಕುಣಿತ, ಕೋಲಾಟ, ಜಾನಪದ ನೃತ್ಯ, ಗೀಗೀಪದ, ಜಾನಪದಗಾಯನ, ಕಂಸಾಳೆ ಸೇರಿದಂತೆ ವಿವಿಧ ಜಾನಪದ ಕಲೆಗಳ ತರಬೇತಿ ನೀಡಲಾಗುವುದು.

ತರಬೇತಿ ಪಡೆಯುವವರಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಆಸಕ್ತ ಕಲಾವಿದರು ಡಿ.15ರೊಳಗೆ ತಮ್ಮ ಹೆಸರು ನೋಂದಾಯಿಸಬಹುದು. ಹೆಸರು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 9448630373 ಮೊ. ಸಂಖ್ಯೆಯನ್ನು ಸಂಪರ್ಕಿಸುವಂತೆ ಕಜಾಪ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ತಿಳಿಸಿದ್ದಾರೆ.