ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ – ನ.30ರಿಂದ 5ಹಂತದಲ್ಲಿ ಮತದಾನ…

227
firstsuddi

ನವದೆಹಲಿ : ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದ್ದು, ನ.30ರಿಂದ 5ಹಂತದಲ್ಲಿ ಚುನಾವಣೆ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಜಾರ್ಖಂಡ್‍ನ ಕೆಲವು ಜಿಲ್ಲೆಗಳಲ್ಲಿ ನಕ್ಸಲ್ ಹಾವಳಿ ಹೆಚ್ಚಾಗಿರುವುದರಿಂದ ವಿಧಾನಸಭೆ ಚುನಾವಣೆಯನ್ನು 5 ಹಂತದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು. ನ.30 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಬಳಿಕ ಡಿ.7ರಂದು 20 ಕ್ಷೇತ್ರಗಳಲ್ಲಿ, ಡಿ.12ರಂದು 17ಕ್ಷೇತ್ರಗಳಲ್ಲಿ, ಡಿ.14ರಂದು 15 ಕ್ಷೇತ್ರಗಳಲ್ಲಿ ಹಾಗೂ ಡಿ.20ರಂದು 16ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಡಿ.23ರಂದು ಫಲಿತಾಂಶ ಹೊರ ಬೀಳಲಿದೆ ಎಂದು ತಿಳಿಸಿದರು.