ಜೀವನದ ಕೊನೆಯ ಘಟ್ಟದಲ್ಲಿದ್ದೇನೆ, ಮತಭಿಕ್ಷೆ ನೀಡಿ : ಹೆಚ್.ಡಿ.ದೇವೇಗೌಡ.

100
firstsuddi

ವಿಜಯಪುರ : ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಮ್ಮ ಇಳಿವಯಸ್ಸಿನಲ್ಲೂ ಉತ್ಸಾಹಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ನಿನ್ನೆ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ದೇವರು ಆಯಸ್ಸು ಕೊಡಬೇಕಷ್ಟೇ ಎಂದು ಭಾವನಾತ್ಮಕವಾಗಿ ಮಾತನಾಡಿದರು. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ಈಗಾಗಲೇ 89 ವರ್ಷ ಆಗಿದೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ನಾನು ಸತ್ತರೂ ಪ್ರಾದೇಶಿಕ ಪಕ್ಷ ಉಳಿಯಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.