ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ : ಅಶ್ವಥ್ ನಾರಾಯಣ್.

92
firstsuddi

ಬೆಂಗಳೂರು : ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆದ್ಯತೆಯ ಆಧಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕೊಡುವ ಗುರಿ ಇದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಬೋಧಕರು, ಬೋಧಕೇತರರು ಹಾಗೂ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದ ಬಳಿಕ ಕಾಲಕ್ರಮೇಣ ತರಗತಿಗಳು ಆರಂಭವಾಗುತ್ತವೆ. ಡೆಲ್ಟಾ, ಡೆಲ್ಟಾ ಪ್ಲಸ್ ವೈರಸ್ ಗಳಿಗೆ ಲಸಿಕೆಯೇ ಸಂಜೀವಿನಿ. ಕೊರೊನಾ ಪ್ರಕರಣ ಹೆಚ್ಚಾಗುವುದರಿಂದ ವೈರಸ್ ರೂಪಾಂತರವಾಗಲಿದೆ. ಹೀಗಾಗಿ ಕೋವಿಡ್ ಗೆ ಲಸಿಕೆಯೇ ರಾಮಬಾಣ. ಜನರು ಕೋವಿಡ್ ನಿಯಮವನ್ನು ಪಾಲಿಸಬೇಕು ಎಂದು ಸೂಚಿಸಿದರು.