ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ.

63
firstsuddi

ಮೈಸೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಇಂದು ಖಚಿತ ಪಡಿಸಿದೆ. ಈಗಾಗಲೇ ಪ್ರಧಾನ ಮಂತ್ರಿ ಕಾರ್ಯಾಲಯವು ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.