ಜೆಸಿಬಿ ಹರಿದು 5 ವರ್ಷದ ಮಗು ಸ್ಥಳದಲ್ಲೇ ಸಾವು…

39
firstsuddi

ಗದಗ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ.

ಮನ್ವಿತ್ ಏರಿಮನಿ(5) ಮೃತ ಬಾಲಕ. ಜೆಸಿಬಿ ಶಿರಹಟ್ಟಿಯಿಂದ ಮಾಗಡಿ ಕಡೆಗೆ ಹೊರಟ್ಟಿತ್ತು. ಈ ವೇಳೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಜೆಸಿಬಿ ಡಿಕ್ಕಿ ಹೊಡೆದಿದೆ. ಜೆಸಿಬಿ ಡಿಕ್ಕಿಯಿಂದ ಮಗುವಿನ ತಲೆಗೆ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದೆ.

ಜೆಸಿಬಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆಯೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಶಿರಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಜೆಸಿಬಿ ಚಾಲಕನ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.