ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ…

310
firstsuddi

ಬೆಂಗಳೂರು : ನಟ, ಕನ್ನಡದ ಹಿರಿಯ ಸಾಹತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್(81) ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ಬಳಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಯಾವುದೇ ವಿಧಿ ವಿಧಾನಗಳಿಲ್ಲದೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಕಲ್ಪಲಿ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ ಎಂದು ಗಿರೀಶ್ ಕಾರ್ನಾಡ್ ಅವರ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದ್ದು, ಗಿರೀಶ್ ಕಾರ್ನಾಡ್ ಅವರಿಗೆ ಕರ್ನಾಟಕ ರಾಜ್ಯೋತ್ಸವ, ಕೇಂದ್ರ ಸಂಗೀತನಾಟಕ ಅಕಾಡೆಮಿ, ಪದ್ಮಶ್ರೀ, ಪದ್ಮಭೂಷಣ ಹಾಗೂ ಜ್ಞಾನಪೀಠ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.