ಜ.22ರಂದು ನಾನು ನನ್ನ ಕುಟುಂಬ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗ್ತೇವೆ: ಎಚ್.ಡಿ.ದೇವೇಗೌಡ.

41
firstsuddi

ಹಾಸನ: ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ನನ್ನ ಪತ್ನಿ, ಕುಮಾರಸ್ವಾಮಿ ಕುಮಾರಸ್ವಾಮಿ ಪತ್ನಿ ಅನಿತಾ ಹಾಗು ನಿಖಿಲ್ ಹೋಗ್ತೇವೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಜನವರಿ 22 ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ ಅದರಲ್ಲೆ ಹೋಗ್ತೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ. ಎಸ್ ಎಂ ಕೃಷ್ಣ, ಡಿ.ಕೆ.ಶಿವಕುಮಾರ್, ನಾನು ನಮ್ಮ ಸ್ವಾಮಿಜಿ ಎಲ್ಲರೂ ಭಾಗಿಯಾಗ್ತೆವೆ ಎಂದು ಹೇಳಿದರು.

ಮೀಸಲಾತಿ ಬಗ್ಗೆ ತಮ್ಮ ಅಧಿಕಾರವಧಿಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ದೇವೇಗೌಡರು ಸ್ಮರಿಸಿದರು. ರಾಜ್ಯ ಸರ್ಕಾರ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆ ನಿರ್ಣಯ ಮಾಡಿ ಕೇಂದ್ರಕ್ಕೆ ಕಳಿಸಿದೆ. ಒಕ್ಕಲಿಗರಿಗೆ ಕೊಟ್ಟಿದ್ದ ಮೀಸಲಾತಿ ಕೋಟಾ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಟ್ಟಿದ್ದು ನಾನು ಎಂದು ಹೆಚ್​ಡಿ ದೇವೇಗೌಡರು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಸಂವಿಧಾನ ಕೊಟ್ಟ ಮೀಸಲಾತಿ ಭರ್ತಿಮಾಡಲು ಆಗದಿದ್ದಾಗ ಉದ್ಯೋಗದಲ್ಲಿ ಪದೋನ್ನತಿ ಬಗ್ಗೆ ಜಾರಿ ಮಾಡಲು ಕೇಳಿದರು. ಶೇಕಡಾ 15 ಎಸ್​ಸಿಗಳಿಗೆ, ಶೇಕಡಾ 3 ಎಸ್​ಟಿಗಳಿಗೆ ಮೀಸಲಾತಿ ಇತ್ತು. ಆದರೆ ಉದ್ಯೋಗದಲ್ಲಿ ಈ ಮೀಸಲಾತಿ ಪ್ರಮಾಣ ತಲುಪದೆ ಹೋದಾಗ ನಾನು ಅದನ್ನ ಶೇಕಡಾ 15 ರಿಂದ 18ಕ್ಕೆ ಮತ್ತು ಶೇಕಡಾ 3 ರಿಂದ 5ಕ್ಕೆ ಏರಿಸಿದೆ. ಇದೆಲ್ಲವನ್ನೂ ಕೂಡ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಾಡಿದ್ದು ಎಂದರು.

ಅಂದು ಶೇಕಡಾ 23 ರಷ್ಟು ತೀರ್ಮಾನ ಮಾಡಿದ್ದು ಈಗಲೂ ಜಾರಿಯಲ್ಲಿ ಇದೆ. ಒಳ ಮೀಸಲಾತಿ ಬಗ್ಗೆ ಈಗ ಸರ್ಕಾರ ಕೇಂದ್ರಕ್ಕೆ ಕಳಿಸಿದೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ ಎಂದರು.

ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ ಮಂಡಿಸಿದ್ದರು. ಅಂದು ಖರ್ಗೆ ಅವರು ವಿಪಕ್ಷದ ನಾಯಕರಾಗಿದ್ದರು. ಅವರು ತಮ್ಮ ಸೀಟ್​ನಿಂದ ನೆಗೆದು ಬಂದು ಆ ನಿರ್ಣಯ ಪ್ರತಿಯನ್ನ ಹರಿದು ಹರಿದು ಅವರ ಮುಖಕ್ಕೆ ಎಸೆದಿದ್ದರು. ಇವತ್ತು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.