ಟಾಲಿವುಟ್ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್…

171
firstsuddi

ಹೈದರಾಬಾದ್ : ಟಾಲಿವುಟ್ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ಚಿರಂಜೀವಿ ಅವರೇ ಸ್ಪಷ್ಟನೆ ನೀಡಿದ್ದಾರೆ. “ಆಚಾರ್ಯ” ಚಿತ್ರದ ಪುನರಾರಂಭಕ್ಕೂ ಮೊದಲು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ದುರಾದೃಷ್ಟಾವಶಾತ್ ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗುತ್ತೇನೆ. ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.