ಟಾಲಿವುಡ್‍ಗೆ ಕಾಲಿಟ್ಟ ದುನಿಯಾ ವಿಜಯ್ – ನಂದಮೂರಿ ಬಾಲಕೃಷ್ಣ ಜೊತೆ ನಟನೆ…

75
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನ ಖ್ಯಾತ ನಟ ದುನಿಯಾ ವಿಜಯ್ ಅವರು ಇದೀಗ ಟಾಲಿವುಡ್‍ಗೆ ಎಂಟ್ರಿ ನೀಡುತ್ತಿದ್ದಾರೆ.

ಹೌದು, ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸಲಿದ್ದಾರೆ. ಈ ಹಿಂದೆ ಬಾಲಕೃಷ್ಣ ಜೊತೆ ವಿಜಯ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ವಿಜಯ್ ಎಲ್ಲಿಯೂ ಬಹಿರಂಗಪಡಿಸಿರಲಿಲ್ಲ. ಆದರೆ ಇದೀಗ ಚಿತ್ರತಂಡವೇ ವಿಜಯ್ ಗೆ ಸ್ವಾಗತ ಕೋರಿ, ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಆದರೆ ವಿಜಿ ಯಾವ ಪಾತ್ರ ಮಾಡಲಿದ್ದಾರೆ ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ.