ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೋವಿಡ್ ಪಾಸಿಟಿವ್…

78
firstsuddi

ಹೈದರಾಬಾದ್ : ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕಿನ ಕೆಲ ಲಕ್ಷಣಗಳು ಕಾಣಿಸಿಕೊಂಡ ಕಾರಣ ಟೆಸ್ಟ್ ಮಾಡಿಸಿದಾಗ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ಈಗ ನಾನು ಸದ್ಯ ಕ್ವಾರಂಟೈನ್ ನಲ್ಲಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.