ಟಿಆರ್​ಎಸ್ ಶಾಸಕರ ಖರೀದಿ ಯತ್ನ ಆರೋಪ : ಬಿ.ಎಲ್. ಸಂತೋಷ್​ಗೆ ಎಸ್‍ಐಟಿಯಿಂದ ಸಮನ್ಸ್…

57
firstsuddi

ಹೈದರಾಬಾದ್ : ಟಿಆರ್​ಎಸ್ ಶಾಸಕರ ಖರೀದಿ ಯತ್ನ ಆರೋಪ ಪ್ರಕರಣದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ(ಎಸ್ ಐಟಿ) ಸಮನ್ಸ್ ಜಾರಿ ಮಾಡಿದೆ.

ಕ್ರಿಮಿನಲ್ ಪ್ರಕ್ರಿಯೆ ಸಂಹಿತೆಯ ಸೆಕ್ಸನ್ 41(ಎ) ಅಡಿಯಲ್ಲಿ ಸಮನ್ಸ್ ಜಾರಿ ಮಾಡಿದ್ದು, ಹೈದರಾಬಾದ್ ನಲ್ಲಿರುವ ಪೊಲೀಸ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ನಲ್ಲಿ ನವೆಂಬರ್ 21 ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಂತೋಷ್ ಅವರಿಗೆ ಸೂಚಿಸಲಾಗಿದೆ. ಒಂದು ವೇಳೆ ಎಸ್ ಐಟಿ ಮುಂದೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಸಮನ್ಸ್ ನಲ್ಲಿ ತಿಳಿಸಲಾಗಿದೆ.

ಕಳೆದ ತಿಂಗಳು ಟಿಆರ್​ಎಸ್ ನ ನಾಲ್ವರು ಶಾಸಕರಿಗೆ ಭಾರಿ ಹಣದ ಆಮಿಷವೊಡ್ಡಿ ಬಿಜೆಪಿಯ ತೆಕ್ಕೆಗೆ ಸೆಳೆಯಲು ಯತ್ನಿಸಲಾಗಿತ್ತು. ಈ ವೇಳೆ ಬಂಧಿಸಲಾಗಿರುವ ಬಿಜೆಪಿ ಏಜೆಂಟ್ ಗಳು ಎನ್ನಲಾದ ಮೂವರ ನಡುವಿನ ಸಂಭಾಷಣೆಯಲ್ಲಿ ಬಿ.ಎಲ್. ಸಂತೋಷ್ ಹೆಸರು ಕೇಳಿಬಂದಿತ್ತು.