ಟಿಪ್ಪು ಜಯಂತಿ ಆಚರಣೆಯನ್ನು ಪುನರ್ ಪರಿಶೀಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…

225
firstsuddi

ಬೆಂಗಳೂರು : ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಈ ಹಿಂದೆ ಸರ್ಕಾರ ಪ್ರಕಟಿಸಿದ ಆದೇಶವನ್ನು ಪುನರ್ ಪರಿಶೀಲನೆ ಮಾಡಿ ಆದೇಶವನ್ನು ತಿದ್ದುಪಡಿ ಮಾಡಬಹುದು. ಮುಂದಿನ 2ತಿಂಗಳ ಒಳಗೆ ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಿ. ಈ ವೇಳೆ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಮಾಡುವವರಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಹೇಳಿ ವಿಚಾರಣೆಯನ್ನು ಜನವರಿ 3ಕ್ಕೆ ಮುಂದೂಡಿದೆ.