ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ಇತಿಹಾಸ ಸೃಷ್ಟಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿತು. ಅದರಂತೆ ಇಂಗ್ಲೆಂಡ್ ಪರ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಕಬ್ ಬೆಥೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಬೆಥೆಲ್ 64 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 51 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಭಾರತದಲ್ಲಿ ಏಕದಿಕ ಕ್ರಿಕೆಟ್ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಜೇಕಬ್ ಬೆಥೆಲ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ 22 ವರ್ಷದ ದಾಂಡಿಗ ಜೋ ರೂಟ್ ಹೆಸರಿನಲ್ಲಿತ್ತು. 2013 ರಲ್ಲಿ ಮೊಹಾಲಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಜೋ ರೂಟ್ ಅರ್ಧಶತಕ ಬಾರಿಸಿದ್ದರು. ಈ ಮೂಲಕ ಭಾರತದಲ್ಲಿ ಅರ್ಧಶತಕ ಸಿಡಿಸಿದ ಇಂಗ್ಲೆಂಡ್ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೇಕಬ್ ಬೆಥೆಲ್ ಯಶಸ್ವಿಯಾಗಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವುದರೊಂದಿಗೆ 21 ವರ್ಷದ ಬೆಥೆಲ್ ಭಾರತೀಯ ಪಿಚ್ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಳ್ಳುವುದರ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.










