ಟೂಲ್‍ಕಿಟ್ ಪ್ರಕರಣ – ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು…

118
First Suddi

ನವದೆಹಲಿ : ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ.

ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಬಂಧಿತ ಆರೋಪಿಯನ್ನು ನ್ಯಾಯಾಲಯ ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ದಿಶಾ ರವಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಪಟಿಯಾಲ ಹೌಸ್ ಕೋರ್ಟ್, 1 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.