ಟೆಂಪೋ ಟ್ರಾವೆಲ್ಲರ್ ಹಾಗೂ ಲಾರಿ ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು…

200
firstsuddi

ಚಿತ್ರದುರ್ಗ : ಟೆಂಪೋ ಟ್ರಾವೆಲ್ಲರ್ ಹಾಗೂ ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಜಿಎಂಟಿ ವೃತ್ತದ ಬಳಿ ನಡೆದಿದೆ. ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20) ಮೃತ ದುರ್ದೈವಿಗಳು. ಇವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದ್ದು, ಬಸವನಗುಡಿಯ ವಿಜಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗೋಕರ್ಣ ಪ್ರವಾಸ ಮುಗಿಸಿ ಹಿಂದಿರುಗುವಾಗ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.