ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ತಪ್ಪಿದ ದುರಂತ…

60
firstsuddi

ಮಂಗಳೂರು: ಟೇಕಾಫ್‍ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಬೆಳಗ್ಗೆ 8:30ಕ್ಕೆ ದುಬೈಗೆ ತೆರಳಲು ಇಂಡಿಗೋ ವಿಮಾನ ಸಿದ್ಧವಾಗಿತ್ತು. ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ವಿಮಾನದ ರೆಕ್ಕೆಗೆ ಹಕ್ಕಿಯೊಂದು ಬಡಿದಿದೆ. ತಕ್ಷಣ ಎಚ್ಚೆತ್ತ ಪೈಲೆಟ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಟೇಕಾಫ್ ಮಾಡದೇ ಮರಳಿ ನಿಲ್ದಾಣಕ್ಕೆ ತಂದಿದ್ದಾರೆ.

ಸದ್ಯ ಪ್ರಯಾಣಿಕರನ್ನು ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಗಿದೆ. ಘಟನೆಯಿಂದ ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.