ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಇಬ್ಬರು ಸ್ಥಳದಲ್ಲೇ ಸಾವು…

68
firstsuddi

ಚಿತ್ರದುರ್ಗ: ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ.

ಮೃತರನ್ನು ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.