ಟ್ಯಾಂಕರ್ -ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ನಾಲ್ವರ ದುರ್ಮರಣ..!

120
firstsuddi

ಕಲಬುರಗಿ : ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕೋಟನೂರು ಬಳಿ ನಡೆದಿದೆ.

ಮೃತರನ್ನು ಉಲ್ಲಾಸ್ (28), ರಾಹುಲ್ (24), ಕಾಶಿ (26) ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬನನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ದುರಂತ ಸಂಭವಿಸಿದ್ದು, ಮೃತರೆಲ್ಲರೂ ನಗರದ ನಿವಾಸಿಗಳು ಎನ್ನಲಾಗಿದೆ. ಜೇವರ್ಗಿ ಮಾರ್ಗದಿಂದ ನಗರಕ್ಕೆ ಕಾರು ಬರುತ್ತಿತ್ತು. ಆಗ ಎದುರಿಗೆ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದ್ದು, ಇಟೋಸ್ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.