ಟ್ರಕ್ – ಕಾರು ನಡುವೆ ಭೀಕರ ಅಪಘಾತ ; 9 ಮಂದಿ ಸಾವು…

49
firstsuddi

ಮುಂಬೈ: ಮಹಾರಾಷ್ಟ್ರ- ಗೋವಾ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ.

ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇಕೋ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 4 ವರ್ಷದ ಮಗು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.