ಗಾಂಧಿನಗರ : ಟ್ರಕ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಗುಜಾರಾತ್ ನ ಆನಂದ್ ಜಿಲ್ಲೆಯ ತಾರಪುರ್ ಹೆದಾರಿಯಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ. ಕುಟುಂಬದವರು ಕಾರಿನಲ್ಲಿ ಸೂರತ್ ನಿಂದ ಭಾವಂಗರ್ ಕಡೆ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ ಎನ್ನಲಾಗಿದೆ.










