ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ…

296
firstsuddi

ಬೆಂಗಳೂರು : ಕನಾಟಕ ರತ್ನ ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಅಖಿಲ ಕರ್ನಾಟಕ ಶಿವರಾಜ್‍ಕುಮಾರ್ ಅಭಿಮಾನಿಗಳ ಸಂಘ ಹಾಗೂ ಅಖಿಲ ಕರ್ನಾಟಕ ರಾಜರತ್ನ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘದವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಚಾಮರಾಜನಗರ ತಾಲ್ಲೂಕಿಗೆ ಡಾ. ರಾಜ್‍ಕುಮಾರ್ ತಾಲ್ಲೂಕು ಎಂದು ಹೆಸರು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದು, ಹಾಗೂ ಬೆಂಗಳುರಿನ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಡಾ. ರಾಜ್‍ಕುಮಾರ್ ಎಂದು ನಾಮಕರಣ ಮಾಡಬೇಕು ಎಂದು ತಿಳಿಸಲಾಗಿದ್ದು, ಅಲ್ಲದೇ ಸಿನಿಮಾ ರಂಗದಲ್ಲಿ 34ವರ್ಷ ಯಶಸ್ವಿಯಾಗಿ ಪೂರೈಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.