ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಕುಮಾರಸ್ವಾಮಿ…

332
firstsuddi

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ಒಂದು ದಿನ ಮುಂಚಿತವಾಗಿ ತಮ್ಮ ಟ್ವಿಟರ್ ಮೂಲಕ ಶುಭಕೋರಿದ್ದಾರೆ. ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.