ಡಿಕೆಶಿ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಗಳಲ್ಲಿ ಸೋಲು ಕಂಡಿದೆ : ಶೋಭಾ ಕರಂದ್ಲಾಜೆ.

160
firstsuddi

ಮಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ಕಂಗಾಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಗಳಲ್ಲಿ ಸೋಲು ಕಂಡಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಜನ ಬೆಂಬಲವಿಲ್ಲ, ಕಾರ್ಯಕರ್ತರ ಬೆಂಬಲವೂ ಇಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಕಾರ್ಯಶೈಲಿಯನ್ನು ಒಪ್ಪುತ್ತಿಲ್ಲ. ಅವರ ಗೊಂದಲಗಳನ್ನು ಮರೆಮಾಚಲು ಪ್ರತಿಬಾರಿ ಬಿಜೆಪಿ ಸರ್ಕಾರ, ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. 50 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿದೆ ಎಂಬುವುದನ್ನು ಜನತೆ ಅರ್ಥಮಾಡಿಕೊಂಡಿದ್ದಾರೆ. ಹಿಂದೆ ಜನರನ್ನು ಮರಳು ಮಾಡಬಹುದಿತ್ತು. ಆದರೆ ಈಗಾ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಿವೆ. ಜನರು ಬುದ್ಧಿವಂತರಾಗಿದ್ದಾರೆ. ಜಾಗೃತರಾಗಿದ್ದಾರೆ. ಯಾರನ್ನೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮಾನಾಡಿದ ಅವರು, ಸಿದ್ದರಾಮಯ್ಯ ಅವರು ವಿಚಾರವಾದಿ ನಾಯಕ ಇರಬಹುದು. ಆದರೆ ಅವರು ಕೊಡವರ ಮತ್ತು ಹಿಂದೂಳ ಭಾವನೆಗೆ ಧಕ್ಕೆ ಮಾಡುತ್ತಿದ್ದಾರೆ. ಕೊಡವರು ಗೋಮಾಂಸ ತಿನ್ನುತ್ತಾರೆ ಎಂದು ಹೇಳಿದ್ದರು. ಇದರಿಂದ ಒಂದು ಜನಾಂಗದ ಓಲೈಕೆಗಾಗಿ ಸಿದ್ದರಾಮಯ್ಯ ಅವರು ಇನ್ನೊಂದು ಜನಾಂಗದ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.