ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ – 10ನೇ ತರಗತಿ ವಿದ್ಯಾರ್ಥಿಯಿಂದಲೇ ಪ್ಲಾನ್!

53
firstsuddi

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಸೋಮವಾರ ಬಾಂಬ್ ಬೆದರಿಕೆ ಬಂದಿತ್ತು. ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿದೆ.

ಇದೇ ತಿಂಗಳು 21 ರಂದು 10ನೇ ತರಗತಿಯ ಮೊದಲನೇ ಪರೀಕ್ಷೆ ಇತ್ತು. ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲಾನ್ ಮಾಡಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಆತನನ್ನು ವಿಚಾರಣೆ ನಡೆಸಿ ಪೊಲೀಸರು ಬಾಲಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.