ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ; ಸೆ.27ಕ್ಕೆ ವಿಚಾರಣೆ ಮುಂದೂಡಿಕೆ…

66
firstsuddi

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದೆಹಲಿಯ ಜಾರಿ ನಿರ್ದೇಶನಾಲಯದ ನ್ಯಾಯಲಯವು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.

ಇಂದು ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಶರ್ಮಾ, ರಾಜೇಂದ್ರ. ಎನ್, ಜಾರ್ಜ್ ಶೀಟ್ ಜೊತೆಗೆ ಇಡಿ ಕೋರ್ಟ್ ಗೆ ಸಲ್ಲಿಸಿರುವ ಎಲ್ಲ ದಾಖಲೆಗಳ ಒದಗಿಸಬೇಕೆಂದು ಮನವಿ ಮಾಡಿದರು. ದಾಖಲೆ ನೀಡಲು ಇಡಿ ಪರ ವಕೀಲರು ನಾಲ್ಕೈದು ವಾರ ಸಮಯ ಬೇಕು ಎಂದು ಕೋರಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ಕೋರ್ಟ್ ವಿಚಾರಣೆ ಮುಂದೂಡಿತು.

ನ್ಯಾಯಾಲಯದ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ನ್ಯಾಯಾಲಯಕ್ಕೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದೆ. ನ್ಯಾಯಾಲಯವು ಕೆಲ ದಾಖಲೆಗಳನ್ನು ಇಡಿ ಅಧಿಕಾರಿಗಳ ಬಳಿ ಕೇಳಿದೆ. ಅವರು ದಾಖಲೆಗಳನ್ನು ಕೊಟ್ಟ ಬಳಿಕ ನಾನು ಪ್ರತಿಕ್ರಿಯಿಸುತ್ತೇನೆ. ಸದ್ಯಕ್ಕೆ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ ಎಂದು ಹೇಳಿದರು.