ಕೋಲಾರ : ಚಿಕ್ಕಮಗಳೂರು ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗೆಳು ಕಲ್ಲು ತೂರಾಟ ನಡೆಸಿದ ಘಟನೆಯನ್ನ ಖಂಡಿಸಿ ಇಂದು ಕೋಲಾರ ಬಂದ್ ಮಾಡಲಾಗಿದೆ.
ಬಂದ್ ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮುತಾಲಿಕ್ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ನಿಷೇಧ ಹೇರಿ ಆದೇಶ ಹೊರಡಿಸಿದ್ದರು. ಹೀಗಿದ್ದರೂ ಈ ಬಂದ್ ಗೆ ಬೆಂಬಲಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ಆಗಮಿಸುತ್ತಿದ್ದರು. ಆದರೆ ಪೊಲೀಸರು ಜಿಲ್ಲಾ ಗಡಿಯಲ್ಲೇ ಅವರನ್ನ ತಡೆದು ವಶಕ್ಕೆ ಪಡೆದಿದ್ದಾರೆ.










