ಡಿ.ಕೆ. ಶಿವಕುಮಾರ್ ಅವರಿಗೆ ಇನ್ನೂ 10 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್…

566
firstsuddi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಿದ್ದ ಹಿನ್ನೆಲೆ, ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್‍ಗೆ ಡಿಕೆಶಿ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲರು ಡಿಕೆಶಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದು, ಅದರಂತೆ ಕೋರ್ಟ್ ಡಿ.ಕೆ. ಶಿವಕುಮಾರ್ ಅವರಿಗೆ ಅ.25 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದು, ಇನ್ನೂ 10 ದಿನ ಡಿಕೆಶಿ ಅವರಿಗೆ ತಿಹಾರ್ ಜೈಲೇ ಗತಿಯಾಗಿದೆ.