ಉಡುಪಿ : ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟವೇ ಹೆಚ್ಚಾಗಿದ್ದು, ಡಿಕೆಶಿ ಮೊದಲು ಸಿದ್ದರಾಮಯ್ಯ ಅವರ ಕಾಟದಿಂದ ತಪ್ಪಿಸಿಕೊಂಡು ಹೊರಬರಲಿ ಬಳಿಕ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. ಇಂದು ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದೆಯೋ ಇಲ್ಲವೋ ಎಂಬ ವಿಪಕ್ಷ ನಾಯಕರ ಪ್ರಶ್ನೆಗೆ ಪ್ರತಿಕ್ರಯಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಇದೆಯೋ ಇಲ್ಲವೋ ಗೊತ್ತಿಲ್ಲ ಸಿದ್ದರಾಮಯ್ಯನವರೂ ಕೊರೊನಾದಿಂದ ಆಸ್ಪತ್ರೆಯಲ್ಲಿದ್ದಾರೆ. ಖ.ಕೆ. ಶಿವಕುಮಾರ್ ಅವರು ಇನ್ನೂ ಕೂಡಾ ಪದಗ್ರಹಣ, ಸನ್ಮಾನದ ಗುಂಗಿನಲ್ಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರೂ ಕೂಡಾ ಅವರಿನ್ನೂ ಫೀಲ್ಡ್ ಗೇ ಇಳಿದಿಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ ಸಿಎಂ ಅಷ್ಟು ವಯಸ್ಸಾದರೂ ಎಷ್ಟೊಂದು ಕ್ರಿಯಾಶೀಲರಾಗಿದ್ದಾರೆ. ವಿಪಕ್ಷದವರು ಕಾಮಾಲೆ ಕಣ್ಣಿಂದ ನೋಡಿದರೆ ನಮ್ಮ ಕೆಲಸ ಕಾಣಲ್ಲ ಸರ್ಕಾರ ಎಲ್ಲದಕ್ಕೂ ಉತ್ತರ ಕೊಡಲು ಸಿದ್ಧವಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ದಿಕ್ಕೆ ಎರಡು ಮೂರು ನಮ್ಮೊಂದಿಗೆ ಮಾತನಾಡುತ್ತಾರೆ. ಅಲ್ಲದೇ ಸಚಿವರು, ಅಧಿಕಾರಿಗಳೊಂದಿಗೆ ಪ್ರತಿದಿನ ಚರ್ಚೆ ನಡೆಸುತ್ತಿದ್ದಾರೆ. ಕೋವಿಡ್, ಪ್ರವಾಹದ ಸಮಯದಲ್ಲಿ ಮುಖ್ಯಮಂತ್ರಿಗಳು ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ಕೂಡಾ ಸರ್ಕಾರದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದರು.










