ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

271
firstsuddi

ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ. ಇಡಿ ಪರ ವಕೀಲರಾದ ಕೆ.ಎಂ. ನಟರಾಜ್ ಅವರು ನ್ಯಾಯಾಲಯಕ್ಕೆ ಗೈರು ಹಾಜರಾದ ಹಿನ್ನೆಲೆ, ರೋಸ್ ಅವೆನ್ಯೂ ನ್ಯಾಯಾಲಯದ ಜಡ್ಜ್ ಅಜಯ್ ಕುಮಾರ್ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ವಿಚಾರಣೆಯನ್ನು ಮುಂದೂಡಲಾಗಿದ್ದು, ಸದ್ಯ ಡಿ.ಕೆ. ಶಿವಕುಮಾರ್ ಅವರನ್ನು ಆರ್.ಎಂ.ಎಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದ್ದು, ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.