ಬೆಂಗಳೂರು : ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಹೆಚ್. ವಿಶ್ವನಾಥ್ ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್ ನ ಹಿರಿಯ ನಾಯಕ ಎಸ್. ಆರ್. ಪಾಟೀಲ್ ಸಹ ಜೊತೆಗಿದ್ದರು.
ಮೊನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ್ದರು. ಅದಕ್ಕೂ ಮುನ್ನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಂಡು ಮಾತುಕತೆ ನಡೆಸಿದ್ದರು. ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಹೇಳಲಾಗಿದೆ.










