ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಶುಭ ಹಾರೈಸಿದ ಅಶ್ವಥ್ ನಾರಾಯಣ್.

36
firstsuddi

ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಶುಭ ಹಾರೈಸಿದ್ದಾರೆ.

ಇಂದು ಶೇಷಾದ್ರಿಪುರಂ ಗುಂಡೂರಾವ್ ಕ್ರೀಡಾಂಗಣದಲ್ಲಿ ಪಶ್ಚಿಮ ವಲಯದ ಮಲ್ಲೇಶ್ವರಂ, ಗಾಂಧಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳನ್ನ ಒಟ್ಟುಗೂಡಿಸಿಕೊಂಡು ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶ್ವಥ್ ನಾರಾಯಣ್ ಅವರು ವೇದಿಕೆ ಮೇಲೆಯೇ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಅಂತಾ ಆಶಿಸಿದರು.

ಜನರನ್ನ ನೇರವಾಗಿ ತಲುಪುವ ಕೆಲಸವನ್ನು ಡಿಕೆ ಶಿವಕುಮಾರ್ ಅವರು ಮಾಡುತ್ತಿದ್ದಾರೆ. ಅವರಿಗೆ ಈಗ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತಾ ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಹೋಗಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಶುಭ ಹಾರೈಸಿದರು.