ಡಿ.8ಕ್ಕೆ ಭಾರತ್ ಬಂದ್‍ಗೆ ಕರೆ ನೀಡಿದ ಪಂಜಾಬ್ ರೈತ ಒಕ್ಕೂಟಗಳು…

132
firstsuddi

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ರೈತರು ಡಿ.8ರಂದು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮೂರು ಕಾಯ್ದೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಪಂಜಾಬ್‍ನ ರೈತರು 9 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರುಗಳು ಹಲವಾರು ಬಾರಿ ಚರ್ಚೆ ನಡೆಸಿದರೂ ಕೇಂದ್ರ ಸರ್ಕಾರ ಇದಕ್ಕೆ ಸ್ಪಂಧಿಸದ ಹಿನ್ನೆಲೆ, ಡಿ.8ರಂದು ಭಾರತ್ ಬಂದ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.