ಡೊನಾಲ್ಡ್ ಟ್ರಂಪ್ ಫೇಸ್‍ಬುಕ್, ಇನ್‌ಸ್ಟಾಗ್ರಾಮ್‌ ಖಾತೆ ಮರುಸ್ಥಾಪನೆ…

71
firstsuddi

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ಮೇಟಾ ಸಂಸ್ಥೆ ತೆರವುಗೊಳಿಸಿದೆ.

ಅಮೆರಿಕ ಸಂಸತ್ ಭವನದ ಮೇಲೆ 2021ರ ಜನವರಿ 6 ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಟ್ರಂಪ್ ಮಾಡಿದ್ದ ಫೇಸ್‍ಬುಕ್ ಪೋಸ್ಟ್ ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್ ಬುಕ್ ಸಂಸ್ಥೆ ಟ್ರಂಪ್ ಖಾತೆಯನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಿತ್ತು. ಇದರೊಂದಿಗೆ ಇನ್‌ಸ್ಟಾಗ್ರಾಮ್‌ ಖಾತೆಯನ್ನು ಬ್ಯಾನ್ ಮಾಡಿತ್ತು. ಇದೀಗ 2 ವರ್ಷಗಳ ನಿಷೇಧದ ಬಳಿಕ ಮರುಸ್ಥಾಪನೆಗೆ ಅವಕಾಶ ನೀಡುವುದಾಗಿ ಮೇಟಾ ಸಂಸ್ಥೆ ತಿಳಿಸಿದೆ.

ನಾವು ಮುಂದಿನ ಕೆಲ ದಿನಗಳಲ್ಲಿ ಟ್ರಂಪ್ ಅವರ ಫೇಸ್‍ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳನ್ನು ಮರುಸ್ಥಾಪಿಸಲು ಅವಕಾಶ ನೀಡುತ್ತಿದ್ದೇವೆ ಎಂದು ಮೆಟಾದ ಜಾಗತಿಕ ವ್ಯವಹಾರಗಳ ಅಧ್ಯಕ್ಷ ನಿಕ್ ಕ್ಲೆಗ್ ತಿಳಿಸಿದ್ದಾರೆ. ಪುನರಾವರ್ತಿತ ಅಪರಾಧಗಳನ್ನು ತಡೆಯಲು ಹೊಸ ಮಾನದಂಡಗಳೊಂದಿಗೆ ಖಾತೆಯನ್ನು ಮರಸ್ಥಾಪಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ.