ಡೋಣಿ ನದಿ ಸೇತುವೆ ಬಿರುಕು – ಸಂಚಾರ ಬಂದ್…

71
firstsuddi

ವಿಜಯಪುರ : ತಾಳಿಕೋಟೆ ಪ್ರವೇಶಿಸುವ ಡೋಣಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆ ಮೇಲೆ ಸಂಚಾರವನ್ನು ಬಂದ್ ಮಾಡಲಾಗಿದೆ.

ಇಂದು ಸ್ಥಳಕ್ಕೆ ದೆಹಲಿಯಿಂದ ಇಬ್ಬರು ಎಂಜಿನಿಯರ್ ಗಳು ಹಾಗೂ ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದು, ಇವರ ಆಗಮನಕ್ಕೆ ಅಧಿಕಾರಿಗಳು ಕಾಯುತ್ತಿದ್ದಾರೆ. ಎಂಜಿನಿಯರ್ ಗಳು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲು ತೀರ್ಮಾನಿಸಲಾಗಿದೆ.

ಸದ್ಯ ಸೇತುವೆ ಪಕ್ಕದಲ್ಲಿರುವ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದು, ಸದ್ಯ ನೀರು ಕಡಿಮೆ ಆಗಿರುವ ಕಾರಣ ಹಳೆ ಸೇತುವೆ ಮೇಲೆ ಸಂಚಾರಕ್ಕೆ ತೊಂದರೆ ಇಲ್ಲ. ಈ ಕಾರಣ ಎರಡು ದಿನಗಳಲ್ಲಿ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಅಧಿಕಾರಿಗಳು ಸಿದ್ಧತೆ ಮಾಡುತ್ತಿದ್ದಾರೆ.