ಬೆಂಗಳೂರು : ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿದ್ದು, ಇದೀಗ ಇಬ್ಬರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಇಬ್ಬರು ನಟಿಯರು ಡ್ರಗ್ಸ್ ಸೇವಿಸಿರುವುದು ದೃಡವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಿಸಿಬಿ ಪೊಲೀಸರು ನಟಿಯರ ತಲೆ ಕೂದಲಿನ ಸ್ಯಾಂಪಲ್ ಪಡೆದು ಹೈದರಾಬಾದ್ ಸಿಎಸ್‍ಎಫ್‍ಎಲ್ ಗೆ ಕಳಿಸಿಕೊಡಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿ ಸಿಸಿಬಿ ಕೈಸೇರಿದ್ದು, ರಿಪೋರ್ಟ್ ನಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ.
ಇಬ್ಬರು ನಟಿಯರನ್ನು ಬಂಧಿಸಿದ್ದಾಗ ತಲೆ ಕೂದಲು ಸಂಗ್ರಹ ಮಾಡಲಾಗಿತ್ತು. ಒಮ್ಮೆ ಸರಿಯಾದ ಕ್ರಮದಲ್ಲಿ ಮಾದರಿ ಸಂಗ್ರಹ ಆಗದೇ ರಿಜೆಕ್ಟ್ ಆಗಿತ್ತು. ಬಳಿಕ ಮತ್ತೊಮ್ಮೆ ಮಾದರಿ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಈಗ ವರದಿ ದೃಢ ಎಂದು ಪ್ರಯೋಗಾಲಯದಿಂದ ವರದಿ ನೀಡಿದೆ ಎಂದು ತಿಳಿದು ಬಂದಿದೆ.










