ಡ್ರೋನ್ ಪ್ರತಾಪ್ ಎಡವಟ್ಟು ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರ ಆಕ್ರೋಶ.

30

ಬೆಂಗಳೂರು: ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್ ಪ್ರತಾಪ್ ವಿಡಿಯೋವೊಂದನ್ನ ರಿಲೀಸ್ ಮಾಡಿದ್ದು, ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ ವಿಡಿಯೋ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದೆ. ಪ್ರತಾಪ್ ಹುಚ್ಚಾಟಕ್ಕೆ ಕಿಡಿ ಕಾರಿದ್ದಾರೆ. ವೀವ್ಸ್ ಸಿಗಲು ಸೋಶಿಯಲ್ ಮೀಡಿಯಾದಲ್ಲಿ ಅದೆಂಥಹ ವಿಡಿಯೋ ಅಪ್ಲೋಡ್ ಮಾಡೋದಕ್ಕೂ ಕೆಲವ್ರು ಸೈ. ಈಗ ಡ್ರೋನ್ ಪ್ರತಾಪ್ ಕೂಡ ಇಂತಹದ್ದೇ ಎಡವಟ್ಟು ಮಾಡಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ವಿಜ್ಞಾನ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನ ರಿಲೀಸ್ ಮಾಡಿದ್ದಾರೆ. ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ. ನೋಡಿ ದೊಡ್ಡ ಬ್ಲಾಸ್ಟ್ ಇದು ಅಂತ ಪ್ರತಾಪ್ ಕೂಗಿದ್ದಾರೆ. ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‍ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಅಂತಾ ಪರಿಸರವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದಾರೆ.