ತಡರಾತ್ರಿವರೆಗೂ ಮನೆ ಅಂಗಳದಲ್ಲಿ ಓದುತ್ತಿದ್ದ SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…

225
firstsuddi

ಕಲಬುರಗಿ : ಮನೆಯ ಅಂಗಳದಲ್ಲಿ ತಡರಾತ್ರಿಯವರೆಗೂ ಓದುತ್ತಾ ಕುಳಿತಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ನಿರಠಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇರುವ ಹಿನ್ನೆಲೆ ವಿದ್ಯಾರ್ಥಿನಿ ತಮ್ಮ ಮನೆಯ ಅಂಗಳದಲ್ಲಿ ತಡರಾತ್ರಿವರೆಗೂ ಓದುತ್ತಾ ಕುಳಿತಿದ್ದ ವೇಳೆ ಯುವಕನೊಬ್ಬ ವಿದ್ಯಾರ್ಥಿನಿಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಕಷ್ಟಪಟ್ಟು ತಪ್ಪಿಸಿಕೊಂಡ ಬಾಲಕಿ ಜೋರಾಗಿ ಕಿರುಚಿದ್ದು, ಇದನ್ನು ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಇದನ್ನು ಗಮನಿಸಿದ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಜೂನ್.24ರ ರಾತ್ರಿಯೇ ಯುವಕನ ವಿರುದ್ಧ ನಿರಠಕಲ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.