ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಮೂಲಕ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.
ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲಾಗದೇ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಸುದ್ದಿ ಆಗಿತ್ತು. ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೂಡ ಸೆಟ್ಟೇರಿದ್ದು ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾವನ್ನು ಹರೀಶ್ ಎಂ.ಡಿ ಹಳ್ಳಿ ಅವರು ನಿರ್ದೇಶನ ಮಾಡುತ್ತಿದ್ದು, ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ತಾರಾಗಣದಲ್ಲಿ ಇದ್ದಾರೆ.










