ತನ್ನ ಇಚ್ಛೆಯಂತೆ ಪತಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ನೇಣಿಗೆ ಶರಣು…

95
firstsuddi

ಹೈದರಾಬಾದ್ : ತನ್ನ ಇಚ್ಛೆಯಂತೆ ಪತಿ ಬ್ಲೌಸ್ ಹೊಲಿಯಲಿಲ್ಲ ಎಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ವಿಜಯಲಕ್ಷ್ಮಿ (36) ಮೃತರು. ದಂಪತಿ ಹೈದರಾಬಾದ್ ನ ಅಂಬರಪೇಟ್ ನಲ್ಲಿ ವಾಸವಾಗಿದ್ದರು. ಶ್ರೀನಿವಾಸ್ ಟೈಲರ್ ಆಗಿದ್ದು, ಸೀರೆ ವ್ಯಾಪಾರ ಮಾಡುತ್ತಿದ್ದರು. ಶನಿವಾರ ಪತ್ನಿ ವಿಜಯಲಕ್ಷ್ಮಿಗೆ ಬ್ಲೌಸ್ ಹೊಲಿದು ಕೊಟ್ಟಿದ್ದಾರೆ. ಆದರೆ ಆಕೆಗೆ ಬ್ಲೌಸ್ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ.

ಬಳಿಕ ವಿಜಯಲಕ್ಷ್ಮಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಮಕ್ಕಳು ಮಧ್ಯಾಹ್ನ 12.30ಕ್ಕೆ ಶಾಲೆಯಿಂದ ಮನೆಗೆ ಬಂದು ಬಾಗಿಲು ತಟ್ಟಿದಾಗ ಆಕೆ ಪ್ರತಿಕ್ರಿಯಿಸಲಿಲ್ಲ. ಬಳಿಕ ಪತಿ ಶ್ರೀನಿವಾಸ್ ಬಾಗಿಲು ಒಡೆದು ಒಳ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಶ್ರೀನಿವಾಸ್ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಂಬರ್ ಪೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.