ತಮಿಳುನಾಡಿನಲ್ಲಿ ಭಾರೀ ಮಳೆ ; ಶಾಲಾ-ಕಾಲೇಜುಗಳಿಗೆ ರಜೆ…

63
firstsuddi

ಚೆನ್ನೈ : ನಿನ್ನೆ ರಾತ್ರಿ ತಮಿಳುನಾಡಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಪ್ರದೇಶಗಳು ಜಲಾವೃತಗೊಂಡಿದೆ. ನಿನ್ನೆ ಬೆಳಗ್ಗೆ 8:30 ರಿಂದ ಇಂದು ಮುಂಜಾನೆ 5:30ರ ವರೆಗೆ ಚೆನ್ನೈನಲ್ಲಿ 126.1 ಮಿಮೀ ಮಳೆಯಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಚೆನ್ನೈ, ತಿರುವಳ್ಳೂರು, ರಾಣಿಪೇಟ್ ಸೇರಿದಂತೆ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ತಮಿಳುನಾಡು ಸರ್ಕಾರ ರಜೆ ಘೋಷಿಸಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಮನೆಯೊಂದರ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ.

ಮುಂದಿನ ಮೂರು ದಿನಗಳವರೆಗೆ ತಮಿಳುನಾಡು, ಪುದುಚೇರಿ-ಕಾರೈಕಲ್ ನ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ ಪೇಟ್, ಮತ್ತು ವೆಲ್ಲೂರು ಸೇರಿದಂತೆ ಉತ್ತರದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ.